ಕೊಲೆ ಪ್ರಕರಣವೊಂದರ ಸಂಬಂಧ ನಟ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರಿನಲ್ಲಿರುವ ಅವರ ಫಾರ್ಮ್ ಹೌಸ್‌ನಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.
ಠಾಣಾ ವ್ಯಾಪ್ತಿಯ ಬಿಡ್ಜ್ ಬಳಿ ಎರಡು ದಿನಗಳ ಹಿಂದೆ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಅವರನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಎಂದು ಗುರುತಿಸಲಾಗಿತ್ತು. ತಲೆ, ದೇಹದ ವಿವಿಧ ಭಾಗಗಳಲ್ಲಿ ಗಾಯದ ಗುರುತುಗಳು ಪತ್ತೆಯಾಗಿದ್ದವು. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಕೊಲೆ ಪ್ರಕರಣದಲ್ಲಿ ಆರೋಪಿಗಳ ಜತೆಗೆ ದರ್ಶನ್ ಶಾಮೀಲಾಗಿರುವುದಕ್ಕೆ ಪುರಾವೆ ಸಿಕ್ಕಿದ್ದು ದರ್ಶನ್ ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತರಲಾಗಿದೆ. ವಿಚಾರಣೆ ಮುಂದುವರಿದಿದೆ.

ಬೆಂಗಳೂರು : ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸಾಕಷ್ಟು ಸುದ್ದಿ ಮಾಡಿದೆ.

ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರುವ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

ಈ ಘಟನೆ ನಡೆದಿದ್ದು ಜೂನ್ 9ರಂದು. ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ವಿನಯ್​ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಅವರನ್ನು ಇರಿಸಲಾಗಿತ್ತು. ಈ ವೇಳೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. 4 ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್​ ಇದ್ದ ಬಗ್ಗೆ ಮಾಹಿತಿ ಇದೆ. ಹತ್ಯೆ ಮಾಡಿ ಮೃತದೇಹವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ವಿಜಯನಗರ ACP ಚಂದನ್​ ತಂಡದಿಂದ ದರ್ಶನ್​ ವಶಕ್ಕೆ ಪಡೆಯಲಾಗಿದೆ,

 

ಪವಿತ್ರಾ ಗೌಡ ಅವರು ಮಾಡೆಲ್‌ ಹಾಗೂ ನಟಿಯೂ ಹೌದು. ʼಅಗಮ್ಯಾʼ, ʼಛತ್ರಿಗಳು ಸಾರ್ ಛತ್ರಿಗಳುʼ, ʼಸಾಗುವ ದಾರಿʼ, ʼಪ್ರೀತಿ ಕಿತಾಬುʼ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಮುಂಚೆ ಪವಿತ್ರಾ ಅವರು ದರ್ಶನ್‌ ಅವರ ತಾಯಿ ಹಾಗೂ ಸಹೋದರಿ ಜತೆಗಿನ ಫೋಟೊವನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದ್ದವು. ಇದಾದ ಮೇಲೆ ದರ್ಶನ್‌ ಸಿನಿಮಾ ಸೆಟ್‌ಗಳಲ್ಲಿ ಪವಿತ್ರಾ ಅವರು ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದೂ ಇದೆ. ಕಳೆದ ವರ್ಷ ದರ್ಶನ್‌ ಅವರ ಜನುಮದಿನ ನಟಿ ಮೇಘಾ ಶೆಟ್ಟಿ ಹಂಚಿಕೊಂಡಿದ್ದ ಚಿತ್ರದಲ್ಲಿ ದರ್ಶನ್ ಜತೆಗೆ ಪವಿತ್ರಾ ಕೂಡ ಇದ್ದರು. ಈ ವೇಳೆ ಮೊದಲ ಬಾರಿಗೆ ಇದರ ವಿರುದ್ಧ ಬಹಿರಂಗವಾಗಿ ಧ್ವನಿ ಎತ್ತಿದ್ದ ದರ್ಶನ್​ ಅವರ ಪತ್ನಿ ವಿಜಯಲಕ್ಷ್ಮೀ ಅವರು ಮೇಘಾ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಇದಾದ ಬಳಿಕ ಮೇಘಾ ಶೆಟ್ಟಿ ಫೋಟೊ ಡಿಲಿಟ್‌ ಮಾಡಿದ್ದರು.