ಬೆಳಗಾವಿ: ಬೆಳಗಾವಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಬೆಳಗಾವಿ ವಲಯದ ಕೋರ್ ಕಮಿಟಿ ಸಭೆ ನಡೆಸಲಾಯಿತು. ಲೋಕಸಮರದಲ್ಲಿ ಪ್ರಚಂಡ ದಿಗ್ವಿಜಯ ಸಾಧಿಸುವ ನಿಟ್ಟಿನಲ್ಲಿನ ಸಿದ್ಧತೆಗಳು ಹಾಗೂ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ ಅಗರವಾಲ್, ಕೇಂದ್ರ ಸಚಿವ ಪ್ರಹ್ಹಾದ ಜೋಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸೇರಿದಂತೆ ಬೆಳಗಾವಿ ವಲಯದ ಪಕ್ಷದ ಶಾಸಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.