ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಜೂನ್ 7ರಂದು ಸಂಜೆ 5:00 ಗಂಟೆಗೆ ತೃತೀಯ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಈ ಮೊದಲು ಶನಿವಾರ ಅವರ ಪ್ರಮಾಣವಚನ ಸ್ವೀಕರಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಇದೀಗ ಶುಕ್ರವಾರ ಪ್ರಮಾಣ ವಚನಕ್ಕೆ ಮುಹೂರ್ತ ನಿಗದಿಯಾಗಿದೆ. ದೆಹಲಿಯಲ್ಲಿ ನಡೆದ ಬಿಜೆಪಿ ನೇತೃತ್ವದ ಸಭೆಯಲ್ಲಿ ನರೇಂದ್ರ ಮೋದಿ ಎನ್ ಡಿಎ ಒಕ್ಕೂಟದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸೇರಿದಂತೆ 21 ನಾಯಕರು ಈ ನಿರ್ಣಯಕ್ಕೆ ಸಹಿ ಹಾಕಿದ್ದಾರೆ.ಮೋದಿ ಪ್ರಮಾಣವಚನ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಅಮಿತ್ ಷಾ, ರಾಜನಾಥ್ ಸಿಂಗ್, ಪ್ರಹ್ಲಾದ್ ಜೋಶಿ, ಸೇರಿದಂತೆ ಮಿತ್ರ ಪಕ್ಷಗಳ ಸಂಸದರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.