ನವದೆಹಲಿ: ಜೂನ್ 9 ರಂದು ಸಂಜೆ 7.15ಕ್ಕೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದೆ.

ಈ ಬಗ್ಗೆ ಎಕ್ಸ್ ತಾಣದಲ್ಲಿ ರಾಷ್ಟ್ರಪತಿ ಭವನ ಮಾಹಿತಿ ನೀಡಿದೆ.

ಪ್ರಧಾನ ಮಂತ್ರಿ ಹಾಗೂ ಮಂತ್ರಿ ಮಂಡಲದ ಇತರ ಸದಸ್ಯರಿಗೆ ಜೂನ್ 9 ರ ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯವರು ಪ್ರಮಾಣವಚನ ಹಾಗೂ ಗೋಪ್ಯತಾ ವಿಧಿಯನ್ನು ಬೋಧಿಸಲಿದ್ದಾರೆ ಎಂದು ಬರೆದುಕೊಂಡಿದೆ. ಅಂದು ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣಗೈಯಲಿದ್ದಾರೆ.