Join The Telegram | Join The WhatsApp |
ನವದೆಹಲಿ :
ರಾಷ್ಟ್ರೀಯ ಮಹಿಳಾ ಆಯೋಗವು ಮುಸ್ಲಿಂ ಹುಡುಗಿಯರ ಮದುವೆ ವಯಸ್ಸನ್ನು ಹೆಚ್ಚಿಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.
ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಎಲ್ಲಾ ಸಮುದಾಯಗಳ ಯುವತಿಯರ ವಿವಾಹ ವಯಸ್ಸನ್ನು ಧರ್ಮಾತೀತವಾಗಿ 18 ವರ್ಷಕ್ಕೆ ನಿಗದಿಪಡಿಸಿದ ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್ ಈ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ರಾಷ್ಟ್ರೀಯ ಮಹಿಳಾ ಆಯೋಗದ ವಕೀಲ ನಿತಿನ್ ಸಲುಜಾ ಅವರು ಮುಸ್ಲಿಂ ಹುಡುಗಿಯರ ಮದುವೆಯ ವಯಸ್ಸನ್ನು ಹೆಚ್ಚಿಸಬೇಕೆಂದು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಪೀಠ ವಿಚಾರಣೆ ನಡೆಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ, ಐಪಿಸಿ ಮತ್ತು ಮಕ್ಕಳ ವಿವಾಹ ನಿಷೇಧ ಕಾಯ್ದೆಯನ್ನು ಧರ್ಮ ಅಥವಾ ವೈಯಕ್ತಿಕ ಕಾನೂನುಗಳನ್ನು ಲೆಕ್ಕಿಸದೆ ಎಲ್ಲರಿಗೂ ಸಮಾನವಾಗಿ ಅನ್ವಯಿಸಲು ನಿರ್ದೇಶನ ನೀಡಬೇಕು. ಸಂವಿಧಾನದ 14, 15 ಮತ್ತು 21ನೇ ವಿಧಿಯ ಅಡಿಯಲ್ಲಿ ಖಾತ್ರಿಪಡಿಸಿದ ಮೂಲಭೂತ ಹಕ್ಕುಗಳನ್ನು ಮುಸ್ಲಿಂ ಮಹಿಳೆಯರು ಮತ್ತು ಬಾಲಕಿಯರಿಗೂ ಅನ್ವಯಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗವು ಮುಸ್ಲಿಂ ವೈಯಕ್ತಿಕ ಕಾನೂನುಗಳ ಅನುಸಾರ 16 ವರ್ಷದ ಬಾಲಕಿಯ ಮದುವೆಯನ್ನು ಮಾನ್ಯಗೊಳಿಸಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇತ್ತೀಚಿಗೆ ನೀಡಿದ ತೀರ್ಪಿನ ಸಿಂಧುತ್ವವನ್ನು ಪ್ರತ್ಯೇಕವಾಗಿ ಪ್ರಶ್ನಿಸಿದ್ದು, ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು.
Join The Telegram | Join The WhatsApp |