Join The Telegram | Join The WhatsApp |
ಹುಬ್ಬಳ್ಳಿ-
ಜನೇವರಿ 12-16 ರವರೆಗೂ ಹುಬ್ಬಳ್ಳಿ ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಯುವಜನೋತ್ಸವದಲ್ಲಿ ಎಲ್ಲ ರಾಜ್ಯಗಳಿಂದ ಸುಮಾರು 7,500 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮದಿನದ ನೆನಪಿಗಾಗಿ ರಾಷ್ಟ್ರೀಯ ಯುವ ಉತ್ಸವವನ್ನು ಪ್ರತಿ ವರ್ಷ ಆಯೋಜಿಸಲಾಗುತ್ತಿದೆ.
ಮೊದಲ ರಾಷ್ಟ್ರೀಯ ಯುವ ಉತ್ಸವವನ್ನು 1995 ರಲ್ಲಿ ರಾಷ್ಟ್ರೀಯ ಏಕೀಕರಣ ಶಿಬಿರದ ಕಾರ್ಯಕ್ರಮದ ಅಡಿಯಲ್ಲಿ ಪ್ರಮುಖ ಚಟುವಟಿಕೆಯಾಗಿ ಪ್ರಾರಂಭಿಸಲಾಯಿತು. 25ನೇ ರಾಷ್ಟ್ರೀಯ ಯುವ ಉತ್ಸವವನ್ನು ಪುದುಚೇರಿಯಲ್ಲಿ ಆಯೋಜಿಸಲಾಗಿತ್ತು.
ಲೋಗೋ, ಮಸ್ಕಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬಿಡುಗಡೆ ಮಾಡಿದರು.
Join The Telegram | Join The WhatsApp |