ಹುಬ್ಬಳ್ಳಿ : ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಮೇಲೆ ದಾಳಿ ಮಾಡಿದ್ದ ಫಯಾಜ್ ಕೇವಲ 30 ಸೆಕೆಂಡ್ಗಳಲ್ಲಿ 14 ಬಾರಿ ಇರಿದಿದ್ದಾನೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ನೇಹಾ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆಯಾಗಿದೆ. ಪ್ರೀತಿ ನಿರಾಕರಿಸಿದ ನೇಹಾಳ ಹೃದಯಕ್ಕೆ ಮೊದಲು ಚಾಕು ಇರಿದ ಆತ, 30 ಸೆಕೆಂಡ್ಗಳಲ್ಲೇ 14 ಬಾರಿ ಇರಿದು ಹತ್ಯೆ ಮಾಡಿದ್ದಾನೆ. ಕತ್ತಿನ ಬಳಿ ಚಾಕು ಇರಿಯುತ್ತಿದ್ದಂತೆ ರಕ್ತನಾಳ ಕತ್ತರಿಸಿದ್ದು, ಇದರಿಂದ ತೀವ್ರ ರಕ್ತಸ್ರವ ಉಂಟಾಗಿದೆ. ಅತಿಯಾದ ರಕ್ತಸ್ರಾವದಿಂದ ನೇಹಾ ಹಿರೇಮಠ ಮೃತಪಟ್ಟಿದ್ದಾರೆ.