ಚಂಡೀಗಢ : ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಭದ್ರತಾ ಅಧಿಕಾರಿಯೊಬ್ಬರು ನೂತನ ಸಂಸದೆ ಕಂಗನಾ ರನೌತ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಸುದ್ದಿ ಭಾರಿ ವೈರಲ್ ಆಗುತ್ತಿದೆ. ಬಾಲಿವುಡ್ ನಟಿ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾಗಿರುವ ಕಂಗನಾ ರನೌತ್ ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿಗೆ ಆಗಮಿಸಿದ ನಂತರ, ಕಂಗನಾ ರನೌತ್ ಅವರು ಸಿಐಎಸ್ಎಫ್ ಮಹಾನಿರ್ದೇಶಕ ನೀನಾ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ, ಘಟನೆಯನ್ನು ಅವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ. ಕಾನ್‌ಸ್ಟೆಬಲ್ ಕುಲ್ವಿಂದರ್‌ ಕೌರ್ ಅವರನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ಸಿಐಎಸ್‌ಎಫ್ ಕಮಾಂಡೆಂಟ್ ಕಚೇರಿಗೆ ಕರೆದೊಯ್ಯಲಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಗಳಲ್ಲಿ ಸಕತ್ ವೈರಲ್ ಆಗಿದೆ. ಕರಾಳ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ಮಾಡುತ್ತಿದ್ದ ವೇಳೆ ರೈತರನ್ನು ಖಲಿಸ್ತಾನಿ ಎಂದು ಕರೆದಿದ್ದಕ್ಕಾಗಿ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಮಹಿಳೆ ಕುಲ್ವಿಂದರ್ ಕೌರ್ ಅವರು ನೂತನ ಸಂಸದರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಹಲವು ಮಂದಿ ಹೇಳಿದ್ದಾರೆ.