ಬೆಳಗಾವಿ :
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇದೀಗ ಮತ್ತೆ ಬಿಜೆಪಿ ಸೇರ್ಪಡೆಗೊಂಡಿರುವುದು ರಾಜಕೀಯ ವಲಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆಗೆ ಅವರ ಹೆಸರು ಇದೀಗ ಬೆಳಗಾವಿ ಹಾಗೂ ಹಾವೇರಿ ಲೋಕಸಭಾ ಮತ ಕ್ಷೇತ್ರದಿಂದ ಪ್ರಬಲವಾಗಿ ಕೇಳಿ ಬರುತ್ತಿದೆ. ಕಳೆದ ಲೋಕಸಭಾ ಉಪಚುನಾವಣೆ ಸಂದರ್ಭದಲ್ಲಿ ಬೆಳಗಾವಿಯಿಂದ ಅವರ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು.