ದಾವಣಗೆರೆ:
ಮುಂದಿನ ಬಾರಿ ನಡೆಯಲಿರುವ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ತುಮಕೂರು ಜಿಲ್ಲೆಗೆ ನೀಡಲು ಪ್ರತಿನಿಧಿಗಳ ಸಭೆಯಲ್ಲಿ ನಿರ್ಣಯಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನ ದಲ್ಲಿ ಭಾನುವಾರ ನಡೆದ ಪ್ರತಿನಿಧಿಗಳ ಸಭೆಯಲ್ಲಿ ಈ ನಿರ್ಣಯವನ್ನು ರಾಜ್ಯಾಧ್ಯಕ್ಷರು ಘೋಷಿಸಿದರು. ತುಮಕೂರು, ಶಿವಮೊಗ್ಗ, ರಾಯಚೂರಿನಲ್ಲಿ ಮುಂದಿನ ಪತ್ರಕರ್ತರ ಸಮ್ಮೇಳನ ನಡೆಸಲು ಬೇಡಿಕೆ ಬಂದಿತ್ತು.