ಬೆಳಗಾವಿ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ, ಕೆ ಎಲ್ ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯ ಬೆಳಗಾವಿ ವತಿಯಿಂದ 2024-2025 ನೇ ಸಾಲಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಕರಡಿಗುದ್ದಿ ಗ್ರಾಮದಲ್ಲಿ ದಿನಾಂಕ 15-04-2025 ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಡಾಕ್ಟರ್ ಹೆಚ್ ಕೆಎಲ್ ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ಎಂ ಚನ್ನಪ್ಪ ಗೋಳ ಅವರು, ವಿದ್ಯಾರ್ಥಿಗಳು ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡು ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮವಾದ ನ್ಯಾಯವಾದಿಗಳಾಗಿ ಹೊರಹೊಮ್ಮಿಸಮಾಜದಲ್ಲಿ ಅನ್ಯಾಯಕ್ಕೆ ಒಳಗಾದವರ ಪರ ವಾದ ಮಂಡಿಸಿ ಅವರಿಗೆ ಸೂಕ್ತ ನ್ಯಾಯವನ್ನು ಒದಗಿಸುವಲ್ಲಿ ಕಾರ್ಯ ಮಾಡಬೇಕು ಎಂದರು.

ಎನ್ಎಸ್ಎಸ್ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ನಾಯಕತ್ವದ ಗುಣಗಳು, ಸಾಮಾಜಿಕ ಅವಶ್ಯಕತೆಗಳನ್ನು ಹಾಗೂ ಸೇವಾ ಮನೋಭಾವನೆಯನ್ನು ರೂಡಿಸಿಕೊಳ್ಳಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕೆಎಲ್ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾ ವಿದ್ಯಾಲಯದ ಪ್ರಾಚಾರ್ಯೆ ಡಾ. ಜ್ಯೋತಿ ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳು ಎನ್ಎಸ್ಎಸ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಪಾಲ್ಗೊಂಡು ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಸಂಯೋಜಕ ಮಂಜುನಾಥ ಅಲ್ಲಪ್ಪನವರ, ಎನ್ಎಸ್ಎಸ್ ಘಟಕದ ವಿದ್ಯಾರ್ಥಿ ಪ್ರತಿನಿಧಿ ಪ್ರೇರಣಾ ಹನಮ ಶೇಟ್, ಮಹಾವಿದ್ಯಾಲಯದ ಎಲ್ಲ ಬೋಧಕ ಸಿಬ್ಬಂದಿ ಹಾಗೂ ಬೋಧಕರು ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.