ಬೆಳಗಾವಿ ಸುವರ್ಣ ಸೌಧ : ವಿಜಯಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೆಬ್ರವರಿ ಅಂತ್ಯದಲ್ಲಿ ಮುಕ್ತಾಯಗೊಳಿಸಿ, ವಿಮಾನ ಹಾರಾಟವನ್ನು ಆರಂಭಿಸಲಾಗುವುದು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಪ್ರಕಾಶ್ ಕೆ ರಾಥೋಡ್ ಕೇಳಿದ ಚುಕ್ಕೆಗುರಿತನ ಪ್ರಶ್ನೆ 134 ಕ್ಕೆ , ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃಧ್ದಿ ಸಚಿವರ ಪರವಾಗಿ ಉತ್ತರಿಸಿದರು.
ವಿಜಯಪುರದಲ್ಲಿ ವಿಮಾನ ನಿಲ್ದಾಣವನ್ನು ಏರ್ ಬಸ್-320 ಮಾದರಿಯ ವಿಮಾನಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆ 347.92 ಕೋಟೊ ರೂ ಗಳ ವೆಚ್ಚದಲ್ಲಿ ಅಭಿವೃದ್ದಿಪಡಿಸಲಗುತ್ತಿದ್ದು, ಈ ಕಾಮಗಾರಿಗೆ ಇದುವರೆಗೆ 347.92 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. 3 ಪ್ಯಾಕೇಕ್ ಗಳಲ್ಲಿ ನಿರ್ಮಾಣವಾಗುತ್ತಿರುವ ಈ ವಿಮಾನ ನಿಲ್ದಾಣದ ಎಲ್ಲಾ ಕಾಮಗಾರಿಗಳು ಪೆಬ್ರವರಿ 2024 ರಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು.
ಈ ವಿಮಾನ ನಿಲ್ದಾಣಕ್ಕಾಗಿ 727.01 ಎಕರೆ ಜಮೀನನ್ನು ಭೂ ಸ್ವಾಧೀನಪಡಿಸಕೊಳ್ಳಲಾಗಿದ್ದು, ಇದುವರೆಗೆ 351 ಎಕರೆ ಜಮೀನಿಗೆ 31.92 ಕೋಟಿ ರೂ ಗಳ ಪರಿಹಾರವನ್ನು ಪಾವತಿಸಲಾಗಿದ್ದು, 28.08 ಎಕರೆ ಜಮೀನಿಗೆ ನ್ಯಾಯಾಲಯದಲ್ಲಿ 2.25 ಕೋಟಿ ರೂ ಗಳನ್ನು ಠೇವಣಿ ಮಾಡಲಾಗಿದೆ ಎಂದರು.
ಪರಿಷತ್ ಸದಸ್ಯ ಗೋವಿಂದರಾಜು, ಕೋಲಾರ ಜಿಲ್ಲೆಯಲ್ಲಿ ಆರು ತಾಲೂಕುಗಳಲ್ಲಿ ಬೆಳ ಹಾನಿ ಹಾಗೂ ಅದರಿಂದ ನಷ್ಟ ಉಂಟಾಗಿರುವ ಬಗ್ಗೆ ಕೃಷಿ ಸಚಿವರ ಗಮನ ಸೆಳೆದರು.
ಸಿ.ಎನ್. ಮಂಜೇಗೌಡ ಹಾಗೂ ಕೆ.ಎಂ. ತಿಪ್ಪೇಸ್ವಾಮಿ ಅವರು ರಾಜ್ಯದಲ್ಲಿ ಹಂಸಧ್ವನಿ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಯನ್ನು ಪ್ರಾರಂಭಿಸದಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆದರು.
ಈ ಬಗ್ಗೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಹಂಸಧ್ವನಿ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಯನ್ನು ಶೀಘ್ರದಲ್ಲಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.