ಬೆಳಗಾವಿ: ಪ್ರಸಕ್ತ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾವು, ಚಿಕ್ಕು, ಗೋಡಂಬಿ, ಬಾಳೆ, ಪಪಾಯಿ, ತೆಂಗು, ಪೇರಲ, ಹಲಸು, ನುಗ್ಗೆ, ಸೀತಾಫಲ, ಕರಿಬೇವು, ಗುಲಾಬಿ ಹಾಗೂ ಇತರೆ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳು, ಅಪ್ರಧಾನ ಹಣ್ಣುಗಳು ಮತ್ತು ಸಾಂಬಾರು ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಹಾಗೂ ಹನಿ ನೀರಾವರಿ ಯೋಜನೆ ಒಗ್ಗೂಡಿಸುವಿಕೆಯ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗಿದೆ.

ಖಾನಾಪುರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ನೀರಾವರಿ ಸೌಲಭ್ಯವನ್ನು ಹೊಂದಿದ ಮತ್ತು ಗ್ರಾಮ ಪಂಚಾಯತಿಯಲ್ಲಿ ನೊಂದಣಿ ಮಾಡಿಕೊಂಡು, ಜಾಬ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ, ಅತಿ ಸಣ್ಣ, ಮಹಿಳಾ ಪ್ರಧಾನ ರೈತರು ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ರೈತರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ತೋಟಗಾರಿಕೆ ಕಛೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಖಾನಾಪುರ (ಜಿ.ಪಂ) ಹಿರಿಯ ಸಹಾಯಕ ತೋಟಗಾರಿಕೆ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.