ಬೆಂಗಳೂರು :
ರಾಜಭವನಕ್ಕೆ ಸೋಮವಾರ (ಡಿ.11)ರ ರಾತ್ರಿ 11.30ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಧಾನಸೌಧ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿವೆ. ಡಿಸೆಂಬರ್ 1 ರಂದು ಬೆಂಗಳೂರಿನ 60ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದು ಶಾಲಾ ಆಡಳಿತ ಮಂಡಳಿಗೆ ಶಾಕ್ ನೀಡಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯದಳ ಆಗಮಿಸಿ ತಪಾಸಣೆ ನಡೆಸಿತ್ತು.