ದೆಹಲಿ :

ಹಿರಿಯ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಅವರು ಬಿಜೆಪಿಗೆ ಸೇರ್ಪಡೆಯಾಗುವ ಊಹಾಪೋಹಗಳು ಹರಡಿವೆ.

ಇಂಡಿಯಾ ಟುಡೇ ಪ್ರಕಾರ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸುತ್ತ ಹೊಸ ವದಂತಿಗಳು ಹರಡಿದ ಒಂದು ದಿನದ ನಂತರ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಮನೀಶ್ ತಿವಾರಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರುವ ಬಗ್ಗೆ ಊಹಾಪೋಹಗಳನ್ನು ಹುಟ್ಟುಹಾಕಿದ್ದಾರೆ.

ಸದ್ಯ ಪಂಜಾಬ್‌ನ ಆನಂದಪುರ ಸಾಹಿಬ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅವರು ಮುಂಬರುವ ಚುನಾವಣೆಯಲ್ಲಿ ಲೂಧಿಯಾನದಿಂದ ಬಿಜೆಪಿ ಪರ ಕಣಕ್ಕೆ ಇಳಿಯಲು ಇಚ್ಛೆ ವ್ಯಕ್ತಪಡಿಸಿದ್ದಾರೆಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

ಮನೀಶ್ ತಿವಾರಿ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.