ಬೆಳಗಾವಿ : ಬೆಳಗಾವಿ ಜಿಲ್ಲಾ ವಿಭಜನೆ ಕುರಿತು ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮಹತ್ವದ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ದಸರಾ ಮುಗಿದ ನಂತರ ಬೆಳಗಾವಿ ಜಿಲ್ಲಾ ವಿಭಜನೆ ಕುರಿತು ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ. ಭೌಗೋಳಿಕ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆ ಆಗದ ಹೊರತು ಅಭಿವೃದ್ಧಿ ಸಾಧ್ಯವಿಲ್ಲ. ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಶಾಸಕರ ಜೊತೆಗೆ ಚರ್ಚಿಸಿ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ ಪತ್ರ ಅರ್ಪಿಸುತ್ತೇವೆ. ಬೆಳಗಾವಿ ಜಿಲ್ಲೆಯಲ್ಲಿ ಯಾವ ಸ್ಥಳವನ್ನು ಹೊಸ ಜಿಲ್ಲೆ ಮಾಡಬೇಕು ಎಂದು ನಾನು ಹೇಳುವುದಿಲ್ಲ. ಆದರೆ, ಜಿಲ್ಲೆಯಲ್ಲಿ ಎರಡು ಅಥವಾ ಮೂರು ಹೊಸ ಜಿಲ್ಲೆಗಳನ್ನು ಮಾಡಬಹುದು ಎಂದು ಅವರು ಪ್ರತಿಪಾದಿಸಿದರು.