ಗೋಕಾಕ:
ಲೋಕೋಪಯೋಗಿ ಸಚಿವ ಸತೀಶ್‍ ಜಾರಕಿಹೊಳಿ ಅವರಿಗೆ ಡಿಸಿಎಂ ಸ್ಥಾನ ನೀಡುವಂತೆ ಈಗ ಅವರ ತವರು ಜಿಲ್ಲೆಯಲ್ಲಿ ಒತ್ತಾಯ ಮೊಳಗಿದೆ. ಡಿಸಿಎಂ ಸ್ಥಾನಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸೇರಿದಂತೆ ಇತರ ದಲಿತ ಸಮುದಾಯದ ಮುಖಂಡರು ಬೇಡಿಕೆ ಮುಂದಿಟ್ಟಿದ್ದಾರೆ.

ಗೋಕಾಕ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆದಲಿತ ಸಮುದಾಯದ ಮುಖಂಡ ರಮೇಶ ಮಾದರ ಮಾತನಾಡಿ, ಸತೀಶ ಜಾರಕಿಹೊಳಿ ಅವರು ಸಮಾಜ ಮೌಢ್ಯದ ವಿರುದ್ಧ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಸಮಾಜವನ್ನು ತಿದ್ದುವ ಕಾರ್ಯದಲ್ಲಿ ತೊಡಗಿದ್ದು, ನಿಷ್ಷಕ್ಷಪಾತ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಪ್ರಗತಿಪರ ಚಿಂತನೆಯನ್ನು ಮೈಗೂಡಿಸಿಕೊಂಡು ಶೋಷಣೆಗೊಳಗಾದ ಸಮುದಾಯಗಳಾದ ಎಸ್‍ಸಿ, ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿದ್ದಾರೆ. ಇಂತಹ ವರಿಗೆ ಸಮಾಜದಲ್ಲಿ ಹೆಚ್ಚಿನ ಸೇವೆ ಮಾಡಲು ಕಾಂಗ್ರೆಸ್ ಪಕ್ಷ ಡಿಸಿಎಂ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.