Join The Telegram | Join The WhatsApp |
ಅಥಣಿ :
ಇಂದು ಅಥಣಿಯಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ) ಅಥಣಿ ಘಟಕದ ವತಿಯಿಂದ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದು, ಈ ಕುರಿತು ಸರಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮನವಿ ರವಾನಿಸಲಾಯಿತು.
ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ, ಉತ್ತಮ ಶಿಕ್ಷಣ, ಸೌಕರ್ಯ ಒದಗಿಸಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ, ದೇಶ ಕಟ್ಟಲು ಅವರನ್ನು ಸಶಕ್ತರಾಗಿಸುವತ್ತ ಸರಕಾರ ಗಮನ ಹರಿಸಬೇಕಿದೆ ಎಂದು ಅಧಿಕಾರಿಗಳಿಗೆ ಮನವಿ ನೀಡಿದರು.
ಕಾಂಗ್ರೆಸ್ ಮುಖಂಡರಾದ ಶಿವು ಗುಡ್ಡಾಪುರ್, ಗಜಾನನ ಮಂಗಸೂಳಿ ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
Join The Telegram | Join The WhatsApp |