ಹಾಲಾಡಿ: ಹಾಲಾಡಿ ಸಮೀಪದ ಹೈಕಾಡಿ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಭೇಟಿ ನೀಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಲೋಕಸಭಾ ಚುನಾವಣೆ ಬಗ್ಗೆ ಕೆ.ಪ್ರತಾಪಚಂದ್ರ ಶೆಟ್ಟಿಯವರಿಂದ ಸಲಹೆ ಹಾಗೂ ಮಾರ್ಗದರ್ಶನ ಪಡೆದರು. ಬೈಂದೂರು ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ,ಕೆಪಿಸಿಸಿ ಕಾರ್ಯದರ್ಶಿ ಜಿ.ಎ.ಬಾವ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ,ಮುಖಂಡರಾದ ರಾಜು ಪೂಜಾರಿ ಬೈಂದೂರು, ಡಿ. ಆರ್.ರಾಜು ಕಾರ್ಕಳ, ರೋಶನ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.