ಬೆಂಗಳೂರು :ಮಾಜಿ ಸಚಿವ ಆರ್. ಶಂಕರ್ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಾರಾ ಅಥವಾ ಬೆಂಬಲ ನೀಡುತ್ತಾರಾ ಎಂಬ ಪ್ರಶ್ನೆ ಮೂಡಿದೆ.
ಶಂಕರ್ ಅವರು ಕರ್ನಾಟಕದ ತೋಟಗಾರಿಕೆ ಮತ್ತು ರೇಷ್ಮೆಗಾರಿಕೆ ರಾಜ್ಯ ಸಚಿವರಾಗಿದ್ದರು. ಅವರು ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಸದಸ್ಯರಾಗಿ 2018 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಣೆಬೆನ್ನೂರಿನಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದರು. ನಂತರ ಅವರು ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ಬೆಂಬಲಿಸಿದ್ದರು. ಇದೀಗ ಚುನಾವಣೆ ಹೊತ್ತಲ್ಲೇ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.