ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವೇಳಾಪಟ್ಟಿ ಪ್ರಕಟಿಸಿದ್ದು, ಮೇ 29ರಿಂದ ತರಗತಿಗಳು ಆರಂಭವಾಗಲಿವೆ. ಪಠ್ಯ ಬೋಧನೆ, ಪರೀಕ್ಷಾ ಚಟುವಟಿಕೆ, ದಸರಾ, ಬೇಸಿಗೆ ರಜೆಯೊಂದಿಗೆ 2025ರ ಮೇ 28ಕ್ಕೆ ಈ ಶೈಕ್ಷಣಿಕ ಸಾಲು ಮುಕ್ತಾಯಗೊಳ್ಳಲಿದೆ. ರಾಜ್ಯ ಪಠ್ಯಕ್ರಮ ಬೋಧಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಈ ವೇಳಾಪಟ್ಟಿ ಅನ್ವಯಿಸಲಿದೆ.