ಕುಂದಾಪುರ : ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇಗುಲದ ಸನ್ನಿಧಿಯಲ್ಲಿ ಅಷ್ಟಬಂಧ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ೪೮ ದಿನಗಳ ನಂತರ ನಡೆಯುವ ದೃಢ ಸಂಪ್ರೋಕ್ಷಣ ಕಲಶಾಭಿಷೇಕ ಏ.೮ ರಂದು ನಡೆಯಲಿದೆ.
ಅಂದು ಬೆಳಿಗ್ಗೆ ೯ಕ್ಕೆ ಪುಣ್ಯಾಹ, ನವಕ ಪ್ರಧಾನ ಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ, ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ, ಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ೧೨.೩೦ಕ್ಕೆ ಮಹಾ ಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.
ಸಂಜೆ ೭ ಗಂಟೆಗೆ ಖಾರ್ವಿಕೇರಿಯ ಶ್ರೀ ಮಹಾಕಾಳಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮವಿದೆ. ರಾತ್ರಿ ೮.೩೦ಕ್ಕೆ ವಿಶೇಷ ರಂಗಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಈ ದೃಢ ಸಂಪ್ರೋಕ್ಷಣ ಕಲಶಾಭಿಷೇಕ ನಿಮಿತ್ತ ದಿನಪೂರ್ತಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಎಂದು ದೇವಳದ ಪ್ರಕಟಣೆ ಕೋರಿದೆ.