ವಯನಾಡ್ (ಕೇರಳ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕರಿಸುವಂತೆ ಶಂಕಿತ ಮಾವೋವಾದಿಗಳು ಬುಧವಾರ ಕರೆ ನೀಡಿದ್ದಾರೆ. ಬೆಳಗ್ಗೆ 6.15 ರ ಸುಮಾರಿನಲ್ಲಿ ಶಸ್ತ್ರ ಸಹಿತ ನಾಲ್ವರು ಮಾವೋವಾದಿಗಳು ತಳಪ್ಪುಳ ಪೊಲೀಸ್‌ ಠಾಣೆ ವ್ಯಾಪ್ತಿಯ ಕಂಬಮಾಲ ಪ್ರದೇಶಕ್ಕೆ ಬಂದು ಅಲ್ಲಿನ ಸ್ಥಳೀಯರಿಗೆ ಚುನಾವಣೆ ಬಹಿಷ್ಕರಿಸುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ವಿಡಿಯೋ ಒಂದು ಬಿಡುಗಡೆಯಾಗಿದೆ. ಈ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಅಷ್ಟರಲ್ಲಿ ಮಾವೋವಾದಿಗಳು ಪರಾರಿಯಾಗಿದ್ದಾರೆ. ಏ.26ರಂದು ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.