ಸಚಿವ ಸತೀಶ ಜಾರಕಿಹೊಳಿ ‘ಸಿಎಂ’ ಆಗಲಿ ಎಂದು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲಿಸಿದ ಅಭಿಮಾನಿಗಳು.!
ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರಾಜ್ಯದ ಸಿಎಂ ಆಗಲಿ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
ಯಮಕನಮರಡಿ ಮತಕ್ಷೇತ್ರದ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಫೋಟೋ ಹಿಡಿದುಕೊಂಡು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಎಲ್ಲಾ ಸಮುದಾಯದ ನಾಯಕ ಸಚಿವ ಸತೀಶ್ ಜಾರಕಿಹೊಳಿ ಅವರು ಈ ಹಿಂದೆ ಹಾಗೂ ಈಗಲೂ ಉತ್ತಮ ಆಡಳಿತ ನಡೆಸಿದ್ದಾರೆ. ಆದ್ದರಿಂದ ನಮ್ಮ ನಾಯಕರಾದ ಸಚವ ಸತೀಶ ಜಾರಕಿಹೊಳಿ ಅವರು ರಾಜ್ಯದ ಸಿಎಂ ಆಗಬೇಕೆಂಬ ಕನಸು ನಮ್ಮದಾಗಿದ್ದು. ಈ ನಮ್ಮ ಬೇಡಿಕೆ ಈಡೇರಿಸುವಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ಅಭಿಮಾನಿಗಳು ತಿಳಿಸಿದ್ದಾರೆ.
ಇದೇ ವೇಳೆ ಅಭಿಮಾನಿಗಳು ದೇವಸ್ಥಾನದ ಎದುರು ಸಚಿವ ಸತೀಶ್ ಜಾರಕಿಹೊಳಿ ಅವರ ಭಾವಚಿತ್ರವನ್ನು ಕೈಯಲ್ಲಿ ಹಿಡಿದುಕೊಂಡು ಸತೀಶ್ ಅಣ್ಣಾನವರಿಗೆ ಜೈ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳಾದ ಬಾಳೇಶ ನಿಂಗಪ್ಪಾ ದಾಸನಟ್ಟಿ, ಈರಪ್ಪಾ ರುದ್ರಪ್ಪಾ ಬಂಜಿರಾಮ, ಮಾರುತಿ ಕುದರಿ, ಲಗಮಣ್ಣಾ ಅರ್ಜುನ ಗುರವ, ರಾಮಚಂದ್ರ ನಾಯಿಕ, ಗಂಗಾರಾಮ ಈರಭಾವಿ ಇದ್ದರು.