ಕಾರವಾರ/ಉಡುಪಿ/ ಮಂಗಳೂರು : ಭಾರಿ ಮಳೆಯ ಕಾರಣದಿಂದ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪಿಯುಸಿವರೆಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9ರಂದು ರಜೆ ಘೋಷಣೆ ಮಾಡಲಾಗಿದೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಅದರಲ್ಲಿಯೂ ಹೊನ್ನಾವರ ಹಾಗೂ ಕುಮಟಾ ತಾಲೂಕಿನಲ್ಲಿ ವಿಪರೀತ ಮಳೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಎಲ್ಲ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಆದೇಶ ಮಾಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದೆ. ಈ ಕಾರಣದಿಂದ ಜಿಲ್ಲೆಯ ಕರಾವಳಿಯ ಐದು ತಾಲೂಕುಗಳಿಗೆ ಜುಲೈ 8ರ ವರೆಗೆ ರಜೆ ಘೋಷಣೆ ಮಾಡಲಾಗಿತ್ತು. ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ವಿಪರೀತ ಮಳೆ ಮುಂದುವರಿದಿದ್ದರಿಂದ ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಎಲ್ಲಾ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ.