ಬೆಂಗಳೂರು: ರಾಜ್ಯಕ್ಕೆ ಇದೀಗ ಮತ್ತೊಂದು ಮಹಾನಗರ ಪಾಲಿಕೆ ಸೇರ್ಪಡೆಗೊಂಡಿದೆ. ಹಾಸನ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೊತೆಗೆ ವಾಲ್ಮೀಕಿ ಜಯಂತಿ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರು ವಿಶ್ವವಿದ್ಯಾಲಯವನ್ನು ವಾಲ್ಮೀಕಿ ಮಹರ್ಷಿ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡುವುದಾಗಿ ಪ್ರಕಟಿಸಿದ್ದರು. ಅದರಂತೆ ಇದೀಗ ರಾಯಚೂರು ವಿಶ್ವವಿದ್ಯಾಲಯವನ್ನು ವಾಲ್ಮೀಕಿ ಮಹರ್ಷಿ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.