ಬೆಂಗಳೂರು :

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರನ್ನಾಗಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸರಕಾರ ಈ ಹಿಂದೆ ಅವರನ್ನು ಕರ್ನಾಟಕ ಕ್ರೀಡಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಇದೀಗ ಪಂಚಮಸಾಲಿ ಲಿಂಗಾಯತ ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಿಜಯಾನಂದ ಕಾಶಪ್ಪನವರ ಅವರನ್ನು ನೇಮಕ ಮಾಡಲಾಗಿದೆ.