ದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಎದುರು ಬಿಜೆಪಿಯಿಂದ ನೂಪುರ್ ಶರ್ಮಾ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. ತಮ್ಮ ತಾಯಿ ಪ್ರತಿನಿಧಿ ಪ್ರತಿನಿಧಿಸುತ್ತಿದ್ದ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಪ್ರಿಯಾಂಕಾ ಸ್ಪರ್ಧಿಸುವ ಸಾಧ್ಯತೆ ಇದೆ. ಅಲ್ಲಿಂದ ನೂಪುರ್ ಶರ್ಮಾ ಸ್ಪರ್ಧೆಗಿಳಿಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರವಾದಿ ಮೊಹಮ್ಮದರ ಬಗ್ಗೆ ವಿವಾದಿಕ ಹೇಳಿಕೆ ನೀಡಿ ಪಕ್ಷದಿಂದ ಅಮಾನತಗಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇದೀಗ ಚುನಾವಣೆ ಹೊತ್ತಲ್ಲೇ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರನ್ನು ಉತ್ತರ ಪ್ರದೇಶದ ರಾಯಬರೇಲಿ ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎಂದು ಕೆಲ ಮಾಧ್ಯಮಗಳು ಹೇಳಿವೆ. ಈ ಮೊದಲು ಅವರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಎದುರು ಸೋತಿದ್ದರು. ನಂತರ ಟಿವಿ ಕಾರ್ಯಕ್ರಮ ಒಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತಾಗಿದ್ದರು. ಒಂದು ವೇಳೆ ಅವರು ಚುನಾವಣೆಗೆ ಕಣಕ್ಕಿಳಿದಲ್ಲಿ ಬಿಜೆಪಿಯಿಂದ ಅಮಾನತು ರದ್ದಾಗುವ ಸಾಧ್ಯತೆ ಇದೆ.