ಬೆಂಗಳೂರು:
ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು: ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಈ ಸೂಚನೆಯನ್ನು ಮುಖ್ಯಮಂತ್ರಿ ನೀಡಿದರು.

ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದರು.

*ಸಭೆಯ ಆರಂಭದಲ್ಲಿ ಮುಖ್ಯಮಂತ್ರಿಗಳು ನೀಡಿದ ಇತರೆ ಸೂಚನೆಗಳ ಹೈಲೈಟ್ಸ್..*

*ಸರ್ಕಾರ ಬಂದು 8 ತಿಂಗಳಾಗಿದೆ. DC, CEO ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ.‌ ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು*

*ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪಿಸುವಲ್ಲಿ ನಿಮ್ಮಗಳ ಅನುಭವ ಎಷ್ಟು ನೆರವಾಗಿದೆ ಎಷ್ಟು ಕೇಳಿ ಮಾಹಿತಿ ಸಿಎಂ ಪಡೆದುಕೊಂಡರು*

*ಕೆಲವು ಕಡೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು, “ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ. ಈ ಕೆಲವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿ ತಿರಸ್ಕರಿಸಿ ಎನ್ನುವ ಸೂಚನೆ ನೀಡಿದರು*

*ಸಾರ್ವಜನಿಕರು ರೆವಿನ್ಯೂ ಇಲಾಖೆ, ತಹಶೀಲ್ದಾರ್ ಮತ್ತು ,AC ಹಾಗೂ DC ಕಚೇರಿಗಳಿಗೆ ಅಲೆದಾಟ ಕಡಿಮೆ ಆಗಿದೆಯಾ?*

*ತಹಶೀಲ್ದಾರ್, AC, DC ಕಚೇರಿಗಳಲ್ಲಿ ಜನರ ಸಮಸ್ಯೆಗೆ ಪರಿಹಾರ ಸಿಗ್ತಾ ಇದೆಯಾ?*

*ಜನರ ಅರ್ಜಿಗಳು ಎಷ್ಟು ದಿನಗಳಿಂದ ಬಾಕಿ ಇವೆ ಪರಿಶೀಲನೆ ನಡೆಸಿದ್ದೀರಾ? ಎಷ್ಟು ಬಾಕಿ ಅರ್ಜಿ ನಿಮ್ಮಿಂದ ಬಗೆಹರಿದಿದೆ?*

*ಎಷ್ಟು ಆಸ್ಪತ್ರೆಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೀರಿ? ಡಯಾಲಿಸಿಸ್ ಕೇಂದ್ರಗಳಲ್ಲಿ ಸಮರ್ಪಕ ಸೇವೆ ಜನರಿಗೆ ಸಿಗುತ್ತಿದೆಯಾ?*

*ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎನ್ನುವ ಸೂಚನೆ ನೀಡಿದ್ದೆ. ಸದ್ಯ ಸಮಾಧಾನಕರವಾಗಿ ಕೆಲಸ ಮಾಡಿದ್ದೀರಿ. ಇದರ ಪ್ರಮಾಣ ಮತ್ತು ವೇಗವನ್ನು ಇನ್ನಷ್ಟು ಹೆಚ್ಚಿಸಿ ಎನ್ನುವ ಸೂಚನೆ ನೀಡಿದರು*.

*ಎಷ್ಟು ಕಚೇರಿಗಳಿಗೆ , ಹಾಸ್ಟೆಲ್ ಗಳಿಗೆ, ಠಾಣೆಗಳಿಗೆ, ಶಾಲೆಗಳಿಗೆ, ಭೇಟಿ ನೀಡಿದ್ದೀರಿ ಎನ್ನು ವಿವರಗಳನ್ನು ಪಡೆದುಕೊಂಡರು*

*ಕೋಲಾರದ ಹಾಸ್ಟೆಲ್ ನಲ್ಲಿ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಯಾಕಾಯ್ತು? ಮೊದಲೇ ಅಧಿಕಾರಿಗಳು ಈ ಬಗ್ಗೆ ನಿಗಾ ಇಡಬೇಕಿತ್ತು. ನಿಗಾ ವಹಿಸದ ಕಾರಣಕ್ಕೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ. ಇವು ಮರು ಕಳಿಸಿದರೆ ಸೂಕ್ತ ಕ್ರಮ ಅನಿವಾರ್ಯವಾಗುತ್ತದೆ ಎಂದರು*

*ನೀವು ಉಸ್ತುವಾರಿ ವಹಿಸಿರುವ ಜಿಲ್ಲೆಯಲ್ಲಿನ‌ ಅಧಿಕಾರಿಗಳು- ಫಲಾನುಭವಿಗಳ ಜತೆ ಸಂಪರ್ಕ, ಸಂಬಂಧ ಇನ್ನಷ್ಟು ಹೆಚ್ಚು ಹೆಚ್ಚು ಏರ್ಪಡಬೇಕು*.

*ಜನ ಹೆಚ್ಚು ಹೋಗೋದು ಕೃಷಿ, ಕಂದಾಯ, ಪೊಲೀಸ್ ಇಲಾಖೆ, ಠಾಣೆಗಳಿಗೆ ಬರ್ತಾರೆ. ನೀವು ಎಷ್ಟು ಠಾಣೆಗಳಿಗೆ ಭೇಟಿ ನೀಡಿದ್ರಿ?*

*ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ? ನಿಮ್ಮಿಂದ ಜಿಲ್ಲಾಡಳಿತಕ್ಕೆ ಏನು ಸಲಹೆ ಸಿಕ್ಕಿದೆ? ನಿಮ್ಮ ಅನುಭವದ ಅನುಕೂಲ ಜಿಲ್ಲೆಗಳಿಗೆ ಎಷ್ಟಾಗಿದೆ ಎಂದು ಪ್ರಶ್ನಿಸಿದರು*

*DC ಗಳಿಗೆ ಜಾತ್ಯತೀತತೆ ಬಗ್ಗೆ ಕಮಿಟ್ ಮೆಂಟ್ ಇರಬೇಕು. ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ. ಅವಕಾಶವೂ ಇಲ್ಲ*

*ನಿಮ್ಮ ಲೆವೆಲ್ ನಲ್ಲಿ ಸಮಸ್ಯೆ ಬಗೆಹರಿಯದೆ ಹೋದರೆ, ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು*

*ಕರ್ತವ್ಯಲೋಪ, ನಿರ್ಲಕ್ಷ್ಯಕ್ಕೆ ಜಿಲ್ಲಾ ಮಟ್ಟದಲ್ಲಿ ನೀವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದೇ ಹೋದರೆ ಜಿಲ್ಲಾ ಮಟ್ಟದಲ್ಲಿ ಹೇಗೆ ಶಿಸ್ತು ತರ್ತೀರಿ ಎಂದರು*