ಬೆಳಗಾವಿ: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಅಂಕಲಿ ಠಾಣೆಯಲ್ಲಿ ನಡೆದಿದೆ.
ಅಂಕಲಿ ಠಾಣೆಯಲ್ಲಿರುವ ಟೇಬಲ್ ಗಳ ಮೇಲೆ ಮದ್ಯದ ಬಾಟಲಿ ಹಾಗೂ ಗ್ಲಾಸುಗಳಿದ್ದು, ಪೊಲೀಸ್ ಸಿಬ್ಬಂದಿ ಮದ್ಯ ಸೇವನೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಪೊಲೀಸ್ ಠಾಣೆಯಲ್ಲೇ ನಿಯಮಗಳನ್ನು ಗಾಳಿಗೆ ತೂರಿ ಸಮವಸ್ತ್ರದಲ್ಲಿ ಎಣ್ಣೆ ಪಾರ್ಟಿ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪಾರ್ಟಿ ಮಾಡಿದ ಸ್ಥಳ ಪೊಲೀಸ್ ಠಾಣೆಯಾಗಿದ್ದು, ಈ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿಯಮಗಳನ್ನು ಪಾಲಿಸದಿರುವವರ ಮೇಲೆ ಹದ್ದಿನ ಕಣ್ಣಿಡಬೇಕಾದ ಪೊಲೀಸರೇ ನಿಯಮಗಳನ್ನು ಗಾಳಿಗೆ ತೂರಿದ್ದು, ಬೇಲಿಯೇ ಎದ್ದು ಹೊಲ ಮೇಯ್ದದಂತಿದೆ.