ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ಸರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ನರೆನ್ಸ್ ಸೆಂಟರ್‌ನಲ್ಲಿ (SKICC) ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಅಬ್ದುಲ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆದ ಮೂರು ದಿನಗಳ ಬಳಿಕ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಒಮಾರ್ ಅವರೊಂದಿಗೆ ಸಕೀನಾ ಮಸೂದ್, ಜಾವೇದ್ ದಾರ್, ಜಾವೇದ್ ರಾಣಾ, ಸುರೀಂದರ್ ಚೌಧರಿ ಮತ್ತು ಸತೀಶ್ ಶರ್ಮಾ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಸರೆನ್ಸ್(ಎನ್‌ಸಿ)-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿತ್ತು. ಆದರೆ ಕೇಂದ್ರ ಸರಕಾರ ಭರವಸೆ ನೀಡಿದ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮನದ ಬೇಡಿಕೆ ಮುಂದಿಟ್ಟು ಕಾಂಗ್ರೆಸ್ ಹೊಸ ಸಂಪುಟ ಸಚಿವ ಸಂಪುಟದಿಂದ ಹೊರಗೊಳಿದಿದೆ. ರಾಜ್ಯದ ಸ್ಥಾನಮಾನಕ್ಕಾಗಿ ಹೋರಾಟವನ್ನು ಮುಂದುವರಿಸುವುದಾಗಿ ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಮತ್ತು ಎನ್ ಸಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದವು. ಒಮರ್ ಅಬ್ದುಲ್ಲಾ ಅವರು ಈ ಹಿಂದೆ 2009 ರಿಂದ 2014ರ ವರೆಗೆ ಮುಖ್ಯಮಂತ್ರಿ ಆಗಿದ್ದರು. ಜಮ್ಮು ಮತ್ತು ಕಾಶ್ಮೀರ 2019ರಲ್ಲಿ ಕೇಂದ್ರಾಡಳಿತ ಪ್ರದೇಶವಾದ ನಂತರ ಅಧಿಕಾರ ವಹಿಸಿಕೊಂಡ ಮೊದಲ ಮುಖ್ಯಮಂತ್ರಿ.