ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾ ಶಿವರಾತ್ರಿಯ ಪ್ರಯುಕ್ತ ವಿವಿಧ ಶಿವನ ದೇವಸ್ಥಾನಗಳಿಗೆ ಭೇಟಿ ನೀಡಿದರು.

ಬೆಳಗಾವಿಯ ಕುಮಾರಸ್ವಾಮಿ ಲೇಔಟ್ ನಲ್ಲಿರುವ ಶಿವಾಲಯದಲ್ಲಿ,
ಜಯನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಾಗೂ ಕಪಿಲೇಶ್ವರ ಮಂದಿರದಲ್ಲಿ ಶಿವನ ಮೂರ್ತಿಗೆ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.