Join The Telegram | Join The WhatsApp |
ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಪ್ರದರ್ಶನ ನೀಡುವ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ, ಶ್ರೀ ದೇವಿ ಮಹಾತ್ಮೆ ಮುಂತಾದ ಪ್ರಸಂಗಗಳು ಅತ್ಯಂತ ಜನಪ್ರಿಯತೆ ಗಳಿಸಿವೆ. ಸಾಂಪ್ರದಾಯಿಕ ಶೈಲಿಯ ಜತೆಗೆ ಆಧುನಿಕತೆಯ ಸ್ಪರ್ಶ ಹೊಂದಿರುವ ಧರ್ಮಸ್ಥಳ ಮೇಳದ ಯಕ್ಷಗಾನಕ್ಕೆ ಜನ ಸಾಗರವೇ ಹರಿದು ಬರುತ್ತದೆ. ದೈವಿ ಭಕ್ತಿಯಿಂದ ಕಲಾಭಿಮಾನಿಗಳು ಧರ್ಮಸ್ಥಳ ಮೇಳದ ಯಕ್ಷಗಾನ ನೋಡುವುದು ವಿಶೇಷವಾಗಿದೆ.
ಧರ್ಮಸ್ಥಳ :
ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಿಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ .
ಈಗಾಗಲೇ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಹರಿಕೆ ಬಯಲಾಟ ಪ್ರದರ್ಶನಗೊಂಡಿದೆ. ಇದೀಗ ದಕ್ಷಿಣಕನ್ನಡ , ಉಡುಪಿ , ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಯಲಾಟ ಸೇವೆ ನಡೆಯಲಿದೆ. ಪ್ರತಿ ದಿನ ಸಂಜೆ 7.00 ಗಂಟೆಯಿಂದ ರಾತ್ರಿ 12.00 ರ ವರೆಗೆ ಕಾಲಮಿತಿಯ ಹರಿಕೆ ಪ್ರದರ್ಶನ ನಡೆಯಲಿದೆ . 2023 ರ ಮೇ 23 ರ ವರೆಗೆ ಬಯಲಾಟ ಪ್ರದರ್ಶನದ ಬಳಿಕ ಮೂರು ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಬಯಲಾಟ ಪ್ರದರ್ಶನ ಮುಕ್ತಾಯಗೊಳ್ಳುತ್ತದೆ .
ಆಧ್ಯಾತ್ಮಿಕ ಮತ್ತುಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಮಾತ್ರ ಬಯಲಾಟದಲ್ಲಿ ಪ್ರದರ್ಶನ ನೀಡುವುದು ಮೇಳದ ವಿಶೇಷ.
ಧರ್ಮಾಧಿಕಾರಿ ಡಿ . ವೀರೇಂದ್ರ ಹೆಗ್ಗಡೆಯವರು , ಹೇಮಾವತಿ ವಿ . ಹೆಗ್ಗಡೆಯವರು , ಡಿ . ಹರ್ಷೇಂದ್ರಕುಮಾರ್, ಸುಪ್ರಿಯಾ ಹೆಚ್ . ಕುಮಾರ್ ಉಪಸ್ಥಿತರಿದ್ದರು.
Join The Telegram | Join The WhatsApp |