
ಹೆಬ್ರಿ: ಎಸ್. ಅರ್ ಪದವಿ ಪೂರ್ವ ಕಾಲೇಜಿನಲ್ಲಿ 2025 – 2026ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಒಂದು ದಿನದ ಓರಿಯಂಟೇಷನ್ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಧಾಕರ್ ಕೆ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅವರು ಶಿಕ್ಷಣ ಸಂಸ್ಥೆಯಲ್ಲಿನ ಶಿಕ್ಷಣದ ಗುಣಮಟ್ಟ ಹಾಗೂ ಶಿಸ್ತನ್ನು ಶ್ಲಾಘಿಸಿ, ಯಶಸ್ಸು ಎನ್ನುವುದು ಕೇವಲ ಅದೃಷ್ಟವಲ್ಲ. ಪರಿಶ್ರಮ, ಸತತ ಪ್ರಯತ್ನದಿಂದ ಯಶಸ್ಸು ದೊರೆಯುತ್ತದೆ ಎಂದು ಹೇಳಿದರು.
ಬದುಕಿನಲ್ಲಿ ಶಿಕ್ಷಣದ ಮಹತ್ವ ಹಾಗೂ ಪೋಷಕರ ಕನಸನ್ನು ವಿದ್ಯಾರ್ಥಿಗಳು ಸಾಕಾರಗೊಳಿಸಬೇಕು ಎಂದು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷ ಹೆಚ್. ನಾಗರಾಜ್ ಶೆಟ್ಟಿ ಮಾತನಾಡಿ, ಕಲಿಯುವಾಗ ಮನಸಿಟ್ಟು ಕಲಿತರೆ ಗುರಿ ತಲುಪಲು ಸಾಧ್ಯ ಎಂದು ಮಾರ್ಗದರ್ಶನ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ಸಪ್ನ ಎನ್ ಶೆಟ್ಟಿಯವರು ಮಾತನಾಡಿ, ವಿದ್ಯಾರ್ಥಿಗಳು ಸ್ವ ಅಧ್ಯಯನದ ಜೊತೆಗೆ ಪದೇ ಪದೇ ಗುರಿಯನ್ನು ಬದಲಾಯಿಸಬಾರದು ಎಂದು ಹೇಳಿದರು.ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್ ಮಾತನಾಡಿ, ಕಾಲೇಜಿನ ಶಿಕ್ಷಣ, ಶಿಸ್ತು, ನಿಯಮದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು.
ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಗೊಂಡ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಅರ್ಥಶಾಸ್ತ್ರ ಉಪನ್ಯಾಸಕ ಅಮೃತ್ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಗ್ಗೆ ತಿಳಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ಗೀತಾ ಪ್ರಭು ನಿರೂಪಿಸಿ, ರಸಾಯನಶಾಸ್ತ್ರ ಉಪನ್ಯಾಸಕಿ ಪ್ರೀತಿ ಹೆಗ್ಡೆ ಸ್ವಾಗತಿಸಿ, ಜೀವಶಾಸ್ತ್ರ ಉಪನ್ಯಾಸಕಿ ಶುಭಲಕ್ಷ್ಮಿ ವಂದಿಸಿದರು.