ಬೆಂಗಳೂರು:
ಕರಾವಳಿಗರ ಒಕ್ಕೂಟದ ವತಿಯಿಂದ ಬೆಂಗಳೂರಿನ ಜೆ.ಪಿ.ನಗರದ ಆರ್‌ಬಿಐ ಲೇಔಟ್ ಬಿಬಿಎಂಪಿ ಆಟದ ಮೈದಾನದಲ್ಲಿ ಭಾನುವಾರ ನಮ್ಮ ‎ಕರಾವಳಿ ಉತ್ಸವ ಆಯೋಜಿಸಲಾಗಿದೆ.

ಉತ್ಸವದಲ್ಲಿ ಕರಾವಳಿಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನು ಹಂದಾಡಿಯವರಿಂದ ನಗೆ ಹಬ್ಬ, ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಮೂಡಬಿದರೆ ಅವರ ನಗೆ ಬುಗ್ಗೆ, ಪರ್ಕಳದ ಅಂಭಾಭವಾನಿ ಮರಾಠಿ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಕರಾವಳಿ ಕಲಾ ವೈಭವ, ಹುಲಿ ಕುಣಿತ, ಮಂದಾರ್ತಿಯ ನಡೂರು ಮಹಾಗಣಪತಿ ಯಕ್ಷ ಗಾನ ಮಂಡಳಿ ವತಿಯಿಂದ ಶಿವದೂತೆ ಪಂಜುರ್ಲಿ ಯಕ್ಷಗಾನ ಆಯೋಜಿಸಲಾಗಿದೆ. ಗ್ರಾಮೀಣ ಕ್ರೀಡೆಗಳಾದ ಹಗ್ಗ ಜಗ್ಗಾಟ, ಮಡಿಕೆ ಒಡೆಯುವ ಸ್ಪರ್ಧೆ, ಚುಕ್ಕಿ ರಂಗೋಲಿ, ಚಿತ್ರಕಲೆ, ಕೊಟ್ಟೆ ಕಟ್ಟುವ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಕರಾವಳಿಯ ಸ್ವಾದಿಷ್ಟ ಖಾದ್ಯಗಳ ಆಹಾರ ಊಟ-ತಿಂಡಿಗಳಿರುತ್ತವೆ. ಸುಮಾರು 1 ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಪ್ರಕಟಣೆ ತಿಳಿಸಿದೆ.