ಬೆಂಗಳೂರು:
ವಾಹನ ಚಾಲನೆಗೆ ಸರ್ಕಾರ ವಯೋಮಿತಿ ನಿಗದಿಪಡಿಸಿದ್ದರೂ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಪೋಷಕರೇ ದ್ವಿಚಕ್ರ ವಾಹನಗಳನ್ನು ನೀಡುತ್ತಿರುವುದರಿಂದ ಮಕ್ಕಳಿಂದ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಪ್ರಕರಣಗಳಲ್ಲಿ ಪೋಷಕರನ್ನೇ ಜವಾಬ್ದಾರರನ್ನಾಗಿಸಿ ಗಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ದ್ವಿಚಕ್ರ ವಾಹನ ಕೊಡೋದೇ ಪೋಷಕರು ಸರ್ಕಾರವನ್ನು ಒತ್ತಾಯಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್, ಅಪ್ರಾಪ್ತ ವಿದ್ಯಾರ್ಥಿಗಳು ವಾಹನ ಚಲಾಯಿಸಿ ಅಪಘಾತಕ್ಕೀಡಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇತ್ತೀಚೆಗೆ ಆನೇಕಲ್‌ನಲ್ಲಿಯೂ ಈ ರೀತಿ ನಡೆದಿದ್ದು, ಇಲ್ಲಿ ಶಾಲೆಯವರನ್ನು ತಪ್ಪಿತಸ್ಥರನ್ನಾಗಿ ಮಾಡಲಾಗಿದೆ. ಇಂತಹ ಘಟನೆಗೆ ಪೋಷಕರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ನಿಯಮ ಮೀರಿ ವಾಹನಗಳನ್ನು ನೀಡುತ್ತಿರುವುದು ಕಾರಣ. ಮಕ್ಕಳಿಗೆ ಚಾಲನಾ ನಿಯಮಗಳು ಗೊತ್ತಿಲ್ಲದೆ, ಸರಿಯಾಗಿ ವಾಹನ ಚಾಲನೆಯೂ ಬಾರದೆ ಅಪಘಾತಕ್ಕೀಡಾಗುತ್ತಿರುವುದು ಹೆಚ್ಚಾಗಿದೆ. ಹಾಗಾಗಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಇಂತಹ ಘಟನೆಗಳು ನಡೆದರೆ ಇನ್ನು ಮುಂದೆ ಪೋಷಕರನ್ನೇ ಹೊಣೆಯಾಗಿಸಿ ಅವರ ವಿರುದ್ಧ ಕ್ರಮ ಜರುಗಿಸಬೇಕು. ಈ ಬಗ್ಗೆ ಗೃಹ ಇಲಾಖೆಯು ಪೋಷಕ ರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಶಾಲೆಗಳನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಆಗ್ರಹಿಸಿದ್ದಾರೆ.