ಆಗುಂಬೆ : ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಗುರುವಾರ ಭಾರಿ ಮಳೆಗೆ ಬೃಹತ್ ಮರ ಉರುಳಿ ಬಿದ್ದಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮರ ಬಿದ್ದ ಕಾರಣಕ್ಕೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಕೊನೆಗೆ ಅರಣ್ಯ ಇಲಾಖೆ ಮತ್ತು ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿದ್ದಾರೆ.