ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ವಾಣಿಜ್ಯ ಪದವಿಯ , ಒಂದು, ಮೂರು ಮತ್ತು ಐದನೇ ಸೆಮಿಸ್ಟರ್ ನ ಫಲಿತಾಂಶ ಪ್ರಕಟಗೊಂಡಿದೆ. ಇದರಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಹದಿಮೂರು ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಶೇಕಡಾ 100 ರಷ್ಟು ಅಂಕ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಎಂ ಜಿ. ಹೆಗಡೆಯವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ, ಶುಭ ಹಾರೈಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಮ್.ಎಮ್. ಮುಂಡರಗಿ ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ, ಅಭಿನಂದಿಸಿದ್ದಾರೆ.