ಬೆಂಗಳೂರು: ಈ ಹಿಂದೆ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮೊ ಕಾಲೇಜುಗಳಿಗೆ ಸರ್ಕಾರ ಮರು ಅನುಮತಿ ನೀಡಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮಂಡ್ಯದ ವಿ.ಸಿ.ಫಾರಂ, ಶಿವಮೊಗ್ಗ ಕೃಷಿ ವಿವಿ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರ ಕಾಲೇಜು, ಧಾರವಾಡ ಕೃಷಿ ವಿವಿ ವ್ಯಾಪ್ತಿಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕಾಲೇಜು ಮತ್ತು ರಾಯಚೂರು ಕೃಷಿ ವಿವಿ ವ್ಯಾಪ್ತಿಯ ಬೀದರ್‌ಕೃಷಿ ಡಿಪ್ಲೊಮೊ ಕಾಲೇಜುಗಳ ಪುನಾರಂಭಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಕೃಷಿ ಡಿಪ್ಲೊಮಾ ಕೋರ್ಸ್ ಗಳ ಪುನಾರಂಭಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಬೇಡಿಕೆ ಸಲ್ಲಿಸಿದ ಹಿನ್ನಲೆಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿಶೇಷ ಕಾಳಜಿ ವಹಿಸಿ ಈ ನಾಲ್ಕು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಾರಂಭಕ್ಕೆ ಅವಕಾಶ ಒದಗಿಸಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಂದು ಪ್ರವೇಶ ಪಡೆದು ಕೃಷಿ ಡಿಪ್ಲೊಮೊ ಕೋರ್ಸ್‌ಗಳನ್ನು ಈ ಹಿಂದಿನಂತೆ ಪಡೆದುಕೊಳ್ಳಬಹುದು.