
ಮೂಡುಬಿದಿರೆ: ಜಿಲ್ಲಾಧಿಕಾರಿ ಆದೇಶದಂತೆ ಮೂಡುಬಿದಿರೆ ಪುರಸಭೆ ವ್ಯಾಪ್ತಿಯಲ್ಲಿ ಮಾರ್ಚ್ 1 ರಿಂದ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಇಂದು ಎಂ.ತಿಳಿಸಿದ್ದಾರೆ.
ಯಾವುದೇ ವ್ಯಾಪಾರ ಸ್ಥಳಗಳಲ್ಲಿ ಪ್ಲಾಸ್ಟಿಕ್ ಚೀಲ, ಭಿತ್ತಿಪತ್ರ, ಪ್ಲಾಸ್ಟಿಕ್ ತಟ್ಟೆ, ಲೋಟ, ಮದುವೆ ಸಮಾರಂಭದಲ್ಲಿ ಊಟದ ಟೇಬಲ್‌ಗೆ ಬಳಸುವ ಪ್ಲಾಸ್ಟಿಕ್, ಥರ್ಮಾಕೋಲ್, ನೀರಿನ ಪ್ಲಾಸ್ಟಿಕ್ ಬಾಟಲಿ, ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‌ನಿಂದ ತಯಾರಾದ ವಸ್ತುಗಳ ಬಳಕೆ ನಿಷೇಧಿಸಲಾಗಿದೆ.
ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಲ್ಲಿ ಆಹಾರ ಪದಾರ್ಥಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ವಸ್ತುಗಳ ಬದಲು ಬಟ್ಟೆ ಚೀಲ, ಪೇಪರ್ ಕವರ್, ಬಾಳೆ ಎಲೆ, ಅಡಿಕೆ ಹಾಳೆ ಬಳಸುವಂತೆ ಸೂಚಿಸಲಾಗಿದೆ. ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಂಡು ಬಂದರೆ ಗರಿಷ್ಠ ದಂಡ ವಿಧಿಸಲಾಗುವುದು.
ಪುನರಾವರ್ತನೆಯಾದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.