ಬೆಂಗಳೂರು :
ರಾಜ್ಯದಲ್ಲಿ ಮೋದಿ ಅಲೆ ಎಲ್ಲಿಯೂ ಕಾಣಿಸುತ್ತಿಲ್ಲ. 2023ರ ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಕಡೆಗಳಲ್ಲೆಲ್ಲ ಕಾಂಗ್ರೆಸ್‌ ಗೆದ್ದಿರುವುದು ಇದಕ್ಕೆ ಸಾಕ್ಷಿ. ರಾಜ್ಯದಲ್ಲಿ ಈಗ ಇರುವುದು “ಗ್ಯಾರಂಟಿ ಅಲೆ ಮಾತ್ರ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ 18ರಿಂದ 19 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತೇವೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿರುವ ಅವರು ಕೇಂದ್ರದಲ್ಲಿ ಸರಕಾರ ರಚನೆ ಮಾಡುವುದಕ್ಕೆ ಅಗತ್ಯವಿರುವುದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್‌ ನೇತೃತ್ವದ ಐಎನ್‌ಡಿಐಎ ಒಕ್ಕೂಟ ಗಳಿಸಲಿದೆ ಎಂದಿದ್ದಾರೆ.ಗ್ಯಾರಂಟಿಗಳಿಂದ ಜನತೆ ಖುಷಿಯಾಗಿದ್ದಾರೆ. ಲೋಕಸಭೆ ಚುನಾವಣೆಯ ಅನಂತರ ಗ್ಯಾರಂಟಿ ಸ್ಥಗಿತಗೊಳ್ಳುತ್ತದೆ ಎಂಬುದು ಬಿಜೆಪಿಯವರ ಸುಳ್ಳು ಆರೋಪ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು.