ಬೆಂಗಳೂರು :
ಕನ್ನಡದ ಹೆಸರಾಂತ ನಟಿ ಪೂಜಾ ಗಾಂಧಿ ಇಂದು ಸಪ್ತಪದಿ ತುಳಿಯಲಿದ್ದಾರೆ.

ಸಂಜೆ ಉದ್ಯಮಿ ವಿಜಯ್ ಜೊತೆ ಪೂಜಾ ಮಂತ್ರ ಮಾಂಗಲ್ಯ ಮಾದರಿಯಲ್ಲಿ ಮದುವೆಯಾಗಲಿದ್ದಾರೆ. ತಮ್ಮ ಆಪ್ತರಿಗೆ ಈಗಾಗಲೇ ಆಹ್ವಾನ ನೀಡಿದ್ದು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮದುವೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.

 

 

ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ ಮದುವೆ ಆ‍ಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ರೆಡಿ ಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ. ಮುಂಗಾರು ಮಳೆ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಾಗಿ ಈ ಹುಡುಗಿ ಇದೀಗ ಕನ್ನಡದವರೇ ಆಗಿದ್ದಾರೆ.