ಬೆಂಗಳೂರು : ತೀವ್ರ ಕೋಲಾಹಲಕ್ಕೆ ಕಾರಣವಾಗಿರುವ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಇದೀಗ ಹೊಸ ತಿರುವು ಪಡೆದುಕೊಂಡಿದ್ದು ಇಬ್ಬರ ನಡುವಿನ ಜಗಳದಲ್ಲಿ ಮೂರನೇ ವ್ಯಕ್ತಿಗೆ ಲಾಭವಾಗುವ ಸಾಧ್ಯತೆ ಇದೆ. ಮಾಜಿ ಮೇಯರ್ ವಿಜಯಕುಮಾರ್ ಪುತ್ರ ಗೌತಮ್ ಕುಮಾರ್ ಅವರ ಹೆಸರು ಮುಂಚೂಣಿಯಲ್ಲಿದ್ದು ಬಹುತೇಕ ಅವರ ಆಯ್ಕೆ ಅಂತಿಮವಾಗುವ ಸಾಧ್ಯತೆ ದಟ್ಟವಾಗಿದೆ.