ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ವಿದೇಶ ಪ್ರವಾಸದಲ್ಲಿದ್ದು, ಶುಕ್ರವಾರ (ಮೇ 03)ರ ಮಧ್ಯರಾತ್ರಿ ರಾಜ್ಯಕ್ಕೆ ಮರಳಲಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರು ಜರ್ಮಿನಿಯ ಫ್ರಾಂಕ್‌ಫರ್ಟ್ ತೆರಳಿದ್ದು, ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದಾರೆ. ಮೇ3 ರಂದು ಮಧ್ಯಾಹ್ನ 1.30ಕ್ಕೆ ವಿಮಾನ ಫ್ರಾಂಕ್ ಫರ್ಟ್‌ನಿಂದ ಹೊರಡಲಿದ್ದು, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.