ಬೆಂಗಳೂರು:
ರಾಜ್ಯದಲ್ಲಿ 2006ರ ಪೂರ್ವದಲ್ಲಿ ನೇಮಕಾತಿಗೊಂಡು ಎನ್‌ಪಿಎಸ್‌ಗೆ (ಹೊಸ ಪಿಂಚಣಿ ಪದ್ದತಿ) ಒಳಪಡುತ್ತಿರುವ ನೌಕರರನ್ನು ಹಳೆ ಪಿಂಚಣಿ (ಒಪಿಎಸ್) ವ್ಯಾಪ್ತಿಗೆ ತರುವ ಬಗ್ಗೆ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸುವುದಾಗಿ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ತಿಳಿಸಿದ್ದಾರೆ.

ಬುಧವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ಹಾಗೂ ಕರ್ನಾಟಕ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ರಮೇಶ್‌ ಸಂಗಾ ಹಾಗೂ ಪದಾಧಿಕಾರಿಗಳು ಎಲ್.ಕೆ. ಅತೀಕ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಅಪರ ಮುಖ್ಯಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾಗಿ ಷಡಕ್ಷರಿ ತಿಳಿಸಿದ್ದಾರೆ.