ಬೆಳಗಾವಿ :
ಹಾವೇರಿ ನಗರದಲ್ಲಿ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳಗಾವಿ ನಗರದ ಪ್ರೇರಣಾ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ಸಿಯಾ ಮೆಹತಾ ಹಾಗೂ ಸಾಚಿ ಮೆಹತಾ ಅವರು ದ್ವಿತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಪ್ರೇರಣಾ ಸಂಸ್ಥೆಯ ನಿರ್ದೇಶಕರಾದ ಗಿರೀಶ್ ದಂಡೆನ್ನವರ, ಅಮಿತ ವಾಗರಾಳಿ ಪ್ರಾಚಾರ್ಯ ಕಿರಣ ಪಾಟೀಲ ಹಾಗೂ ಸಮಸ್ತ ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.