ನವದೆಹಲಿ: ರಾಷ್ಟ್ರವೇ ಸರ್ವಸ್ವ’ ಮತ್ತು ಜನ ಸೇವೆಯೇ ಜನಾರ್ದನ ಸೇವೆ ಎಂಬುದನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಲಿಸಿಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಲೆಕ್ಸ್ ಫ್ರಿಸ್ಮನ್ ಅವರ ಪಾಡ್‌ಕಾಸ್ಟ್‌ನಲ್ಲಿ ನರೇಂದ್ರ ಮೋದಿ ಈ ಕುರಿತು ಮಾತನಾಡಿದ್ದಾರೆ.

ಆರ್‌ಎಸ್‌ಎಸ್‌ ಮೂಲಕ ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಕಂಡುಕೊಂಡೆ. ಅಂತಹ ಪವಿತ್ರ ಸಂಸ್ಥೆಯಿಂದ ಬದುಕಿನ ಮೌಲ್ಯಗಳನ್ನು ಕರಗತ ಮಾಡಲು ಸಾಧ್ಯವಾಗಿರುವುದಕ್ಕೆ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ತಮ್ಮ ಬಾಲ್ಯದ ದಿನಗಳನ್ನು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ. ‘ನನ್ನ ಬಾಲ್ಯವನ್ನು ಕಡುಬಡತನದಲ್ಲಿ ಕಳೆದಿದ್ದೇನೆ. ಆದರೆ ಎಂದಿಗೂ ಅದರ ಭಾಸವಾಗಿರಲಿಲ್ಲ’ ಎಂದು ಹೇಳಿದ್ದಾರೆ.

‘ತಂದೆಯ ಚಹಾ ಅಂಗಡಿಯಲ್ಲಿ ಕುಳಿತಿದ್ದಾಗ ಅಲ್ಲಿಗೆ ಬರುತ್ತಿದ್ದ ಜನರಿಂದ ನಾನು ಬಹಳಷ್ಟು ವಿಚಾರಗಳನ್ನು ಕಲಿತಿದ್ದೇನೆ. ಈ ಕಲಿಕೆಗಳನ್ನು ನನ್ನ ಸಾರ್ವಜನಿಕ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.
ವಿಮರ್ಶೆಗಳನ್ನು ನಾನು ಸ್ವಾಗತಿಸುತ್ತೇನೆ. ಅದು ಪ್ರಜಾಪ್ರಭುತ್ವದ ಆತ್ಮ ಎಂದು ಬಲವಾಗಿ ನಂಬಿದ್ದೇನೆ’ ಎಂದು ಹೇಳಿದ್ದಾರೆ.