ನವದೆಹಲಿ: ವಾರಾಣಸಿ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಸುವ ಮುನ್ನಾ ದಿನವಾದ ಸೋಮವಾರ ಪ್ರಧಾನಿ ಮೋದಿ, ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 6 ಕಿ. ಮೀ ರೋಡ್ ಶೋ ನಡೆಸಿದ್ದಾರೆ. ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನಗರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ.