ನವದೆಹಲಿ: ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ರಾತ್ರಿ 8ಕ್ಕೆ ಮಾತನಾಡಲಿದ್ದಾರೆ.

ಈ ಕುರಿತು ಪಿಟಿಐ ಟ್ವಿಟ್ ಮಾಡಿದೆ.

ಏ. 22ರಂದು ಪಹಲ್ಲಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಪಾಕಿಸ್ತಾನ ನೆಲೆಯ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದಂತೆ 26 ಜನ ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರ’ವನ್ನು ಮೇ 7ರಿಂದ ಆರಂಭಿಸಿ, ಉಗ್ರರ ನೆಲೆಯನ್ನು ಧ್ವಂಸಗೊಳಿಸಿತು.

ಇದರ ಬೆನ್ನಲ್ಲೇ ಪಾಕಿಸ್ತಾನ ನಡೆಸಿದ ಸೇನಾ ದಾಳಿಯ ಯತ್ನಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆಯೂ ರಕ್ಷಣಾ ಕಾರ್ಯ ಕೈಗೊಂಡಿತ್ತು. ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ ಸೋಮವಾರ ಉಭಯ ರಾಷ್ಟ್ರಗಳ ಸೇನಾಧಿಕಾರಿಗಳ ಸಭೆ ಆಯೋಜನೆಗೊಂಡಿದೆ.

ಇದೇ ಸಂದರ್ಭದಲ್ಲಿ ಪ್ರಧಾನಿ ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.