ಮುಂಬೈ: 25 ವರ್ಷದ ಏರ್ ಇಂಡಿಯಾದ ಮಹಿಳಾ ಪೈಲಟ್ ಮುಂಬೈನ ತಮ್ಮ ಫ್ಲಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಆಕೆಯ ಗೆಳೆಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಅಂಧೇರಿಯ ಮರೋಲ್ ಪ್ರದೇಶದ ಕನಕಿಯಾ ರೈನ್‌ಫಾರೆಸ್ಟ್ ಕಟ್ಟಡದ ಬಾಡಿಗೆ ಫ್ಲಾಟ್‌ನಲ್ಲಿ ಮಹಿಳಾ ಪೈಲಟ್ ಸೃಷ್ಟಿ ತುಲಿ ಅವರ ಶವವು ಪತ್ತೆಯಾಗಿದೆ. ಅವರು ಡೇಟಾ ಕೇಬಲ್‌ನಿಂದ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ, ಆದರೆ ಯಾವುದೇ ಆತ್ಮಹತ್ಯೆ ಟಿಪ್ಪಣಿ ಪತ್ತೆಯಾಗಿಲ್ಲ.
ಮಹಿಳೆಯ ಪ್ರಿಯಕರನನ್ನು ಆದಿತ್ಯ ಪಂಡಿತ್ (27) ಎಂಬಾತನನ್ನುಆಕೆಯ ಕುಟುಂಬದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ.
ಪೊವೈ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಮ್ಮ ದೂರಿನಲ್ಲಿ, ಪಂಡಿತ್ ಆಗಾಗ್ಗೆ ಸಾರ್ವಜನಿಕವಾಗಿ ಕಿರುಕುಳ ನೀಡುತ್ತಿದ್ದರು ಮತ್ತು ಅವಮಾನಿಸುತ್ತಿದ್ದರು ಎಂದು ಸೃಷ್ಟಿ ತುಲಿಯ ಚಿಕ್ಕಪ್ಪ ಆರೋಪಿಸಿದ್ದಾರೆ. ಪಂಡಿತ್ ಮಾಂಸಾಹಾರ ತ್ಯಜಿಸುವಂತೆ ಒತ್ತಾಯಿಸುತ್ತಿದ್ದ ಎಂದು ಅವರು ಹೇಳಿದ್ದಾರೆ.
ಸೋಮವಾರ ಮುಂಜಾನೆ, ಸೃಷ್ಟಿ ತುಲಿ ಅವರು ರಸ್ತೆ ಮಾರ್ಗವಾಗಿ ದೆಹಲಿಗೆ ಹೋಗುತ್ತಿದ್ದ ಪಂಡಿತಗೆ ಕರೆ ಮಾಡಿದ್ದರು ಹಾಗೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದರು. ಪಂಡಿತ್ ತಕ್ಷಣವೇ ಮುಂಬೈಗೆ ಧಾವಿಸಿದಾಗ, ಫ್ಲಾಟ್‌ನ ಬಾಗಿಲು ಬೀಗ ಹಾಕಿರುವುದು ಕಂಡುಬಂತು.ಬಾಗಿಲು ತೆರೆಯಲು ಕೀ ಮೇಕರ್ ಬಂದು ಕೀ ತೆಗೆದ ನಂತರ ಒಳಪ್ರವೇಶಿದಾಗ ತಮ್ಮ ಗೆಳತಿ ಡೇಟಾ ಕೇಬಲ್‌ನಲ್ಲಿ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಆಕೆಯನ್ನು ಅಂಧೇರಿಯ ಸೆವೆನ್‌ಹಿಲ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆಕೆ ಸಾವಿಗೀಡಾಗಿದ್ದಾರೆ ಎಂದು ಘೋಷಿಸಿದರು.
ಸೃಷ್ಟಿ ತುಲಿ ಉತ್ತರ ಪ್ರದೇಶ ಮೂಲದವರಾಗಿದ್ದು, ಕಳೆದ ವರ್ಷ ಜೂನ್‌ನಿಂದ ಮುಂಬೈನಲ್ಲಿ ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ದೆಹಲಿಯಲ್ಲಿ ವಾಣಿಜ್ಯ ಪೈಲಟ್ ಕೋರ್ಸ್ ಓದುತ್ತಿರುವಾಗ ಪಂಡಿತ್ ಅವರನ್ನು ಭೇಟಿಯಾಗಿದ್ದರು ಮತ್ತು ಶೀಘ್ರದಲ್ಲೇ ಇಬ್ಬರ ಮಧ್ಯೆ ಪ್ರೀತಿ ಬಳೆದಿತ್ತು.ಪಂಡಿತ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಯಿತು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನವೆಂಬರ್ 29 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.